2 Samuel 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
Kannada BSI Bible 2016
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿ ಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ ನೂರು ಒಣಗಿದ ದ್ರಾಕ್ಷೇ ಗೊಂಚಲುಗಳನ್ನೂ ನೂರು ಹಣ್ಣುಗಳನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
Kannada Bible (KNCL) BSI 2016
ದಾವೀದನು ಗುಡ್ಡದ ತುದಿಯ ಆಚೆಗೆ ಹೋಗುವಷ್ಟರಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ಇನ್ನೂರು ರೊಟ್ಟಿಗಳನ್ನು, ನೂರು ಒಣಗಿದ ದ್ರಾಕ್ಷಿಗೊಂಚಲುಗಳನ್ನು, ನೂರು ಹಣ್ಣುಗಳನ್ನು ಹಾಗು ಒಂದು ಬುದ್ದಲಿ ದ್ರಾಕ್ಷಾರಸವನ್ನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.