2 Samuel 16:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
Kannada BSI Bible 2016
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.