2 Samuel 16:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
Kannada BSI Bible 2016
ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
Kannada Bible (KNCL) BSI 2016
ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.