2 Samuel 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.
Kannada BSI Bible 2016
ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲೆಸೆಯುತ್ತಾ ಧೂಳೆರಚುತ್ತಾ ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.
Kannada Bible (KNCL) BSI 2016
ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು.