2 Samuel 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.
Kannada BSI Bible 2016
ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.
Kannada Bible (KNCL) BSI 2016
ಆಗ ಅಬ್ಷಾಲೋಮನಿಗಾಗಿ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲ ಇಸ್ರಯೇಲರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.