2 Samuel 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
Kannada BSI Bible 2016
ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.
Kannada Bible (KNCL) BSI 2016
ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.