2 Samuel 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನ ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟುಗೂಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
Kannada BSI Bible 2016
ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದಾವೀದನಿಗೂ ಅವನ ಎಲ್ಲಾ ಸೇವಕರಿಗೂ ಎಡಬಲದಲ್ಲಿರುವ ಸೈನಿಕರಿಗೂ ಶೂರರಿಗೂ ಕಲ್ಲೆಸೆಯ ತೊಡಗಿದನು.
Kannada Bible (KNCL) BSI 2016
ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯ ತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಎಡಬಲದಲ್ಲಿ ಸೈನಿಕರೂ, ವಿಶೇಷ ಕಾವಲುಗಾರರೂ ಇದ್ದರು. ಆದರೂ ಶಿಮ್ಮಿಯು ದಾವೀದನ ಮೇಲೆಯೂ, ಅವನ ಅಧಿಕಾರಿಗಳ ಮೇಲೆಯೂ ಕಲ್ಲುಗಳನ್ನು ಎಸೆದನು.