2 Samuel 17:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.
Kannada BSI Bible 2016
ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ.
Kannada Bible (KNCL) BSI 2016
ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.