2 Samuel 17:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
Kannada BSI Bible 2016
ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.
Kannada Bible (KNCL) BSI 2016
ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.