2 Samuel 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.
Kannada BSI Bible 2016
ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಇಬ್ಬನಿಯು ನೆಲದ ಮೇಲೆ ಹೇಗೋ ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.
Kannada Bible (KNCL) BSI 2016
ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ.