2 Samuel 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದಾವೀದನು ತಪ್ಪಿಸಿಕೊಂಡು ಬಂದು ನಗರಕ್ಕೆ ನುಗ್ಗಿದರೆ, ಇಸ್ರೇಲರೆಲ್ಲ ಆ ನಗರದ ಹತ್ತಿರಕ್ಕೆ ಹಗ್ಗಗಳನ್ನು ತರುತ್ತಾರೆ. ನಾವು ಆ ನಗರದ ಗೋಡೆಗಳನ್ನು ಕಣಿವೆಯ ಆಳಕ್ಕೆ ಎಳೆದು ಬಿಡುತ್ತೇವೆ. ಆ ನಗರದಲ್ಲಿ ಒಂದು ಸಣ್ಣ ಕಲ್ಲು ಸಹ ಉಳಿಯಲು ಬಿಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.
Kannada BSI Bible 2016
ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ಪಟ್ಟಣವನ್ನು ಹೊಕ್ಕಿರುವದಾದರೆ ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ ಅಂದನು.
Kannada Bible (KNCL) BSI 2016
ಅವನು ಒಂದು ಪಟ್ಟಣವನ್ನು ಹೊಕ್ಕಿರುವುದು ಆದರೆ ಇಸ್ರಯೇಲರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.