2 Samuel 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
Kannada BSI Bible 2016
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.
Kannada Bible (KNCL) BSI 2016
ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.