2 Samuel 17:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೂಷೈಯು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಆ ವಿಚಾರಗಳನ್ನು ಹೇಳಿದನು. ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆ ಅಹೀತೋಫೆಲನು ಮಾಡಿದ ಸಲಹೆಗಳ ವಿಚಾರವನ್ನು ಮತ್ತು ತಾನು ನೀಡಿದ ಸಲಹೆಗಳ ವರದಿಯನ್ನು, ಚಾದೋಕ ಮತ್ತು ಎಬ್ಯಾತಾರನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.
Kannada BSI Bible 2016
ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಹೂಷೈಯು ಯಾಜಕರಾದ ಚಾದೋಕ ಎಬ್ಯಾತಾರರಿಗೆ - ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೀಗೆ ಹೇಳಿದೆನು.
Kannada Bible (KNCL) BSI 2016
ತರುವಾಯ ಹೂಷೈಯು, ಯಾಜಕರಾದ ಚಾದೋಕ ಹಾಗು ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೂಷೈಯು ಯಾಜಕರಾದ ಚಾದೋಕನಿಗೂ, ಅಬಿಯಾತರನಿಗೂ, “ಅಹೀತೋಫೆಲನು ಅಬ್ಷಾಲೋಮನಿಗೂ, ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.