2 Samuel 17:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿಯೊಳಗೆ ಇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.
Kannada BSI Bible 2016
ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀವಿುಗೆ ಓಡಿ ಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.
Kannada Bible (KNCL) BSI 2016
ಆದರೂ ಒಬ್ಬ ಯುವಕನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀಮಿಗೆ ಓಡಿಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು.