2 Samuel 17:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದ್ದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.
Kannada BSI Bible 2016
ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದದರಿಂದ ಸಂಗತಿಯು ಯಾರಿಗೂ ಗೊತ್ತಾಗಲಿಲ್ಲ.
Kannada Bible (KNCL) BSI 2016
ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದುದರಿಂದ ಅವರಿರುವ ಸಂಗತಿ ಯಾರಿಗೂ ಗೊತ್ತಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನೆಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿದಳು. ಈ ಕಾರ್ಯ ಯಾರಿಗೂ ತಿಳಿಯದೆ ಹೋಯಿತು.