2 Samuel 17:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನ ಸೈನಿಕರು ಹೋದ ಮೇಲೆ ಯೋನಾತಾನ್ ಮತ್ತು ಅಹೀಮಾಚರು ಬಾವಿಯಿಂದ ಮೇಲಕ್ಕೆ ಬಂದರು. ಅವರು ಅರಸನಾದ ದಾವೀದನ ಬಳಿಗೆ ಹೋಗಿ, “ಬೇಗ, ನದಿಯನ್ನು ದಾಟಿಹೋಗು. ಅಹೀತೋಫೆಲನು ನಿನ್ನ ವಿರುದ್ಧವಾಗಿ ಈ ಸಂಗತಿಗಳನ್ನು ಹೇಳಿದ್ದಾನೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.
Kannada BSI Bible 2016
ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದದರಿಂದ ಬೇಗನೆ ಎದ್ದು ಹೊಳೆದಾಟಿ ಹೋಗು ಎಂದು ಹೇಳಿದರು.
Kannada Bible (KNCL) BSI 2016
ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ಅಹೀತೋಫೆಲನು ನಿಮಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಹೋದ ತರುವಾಯ, ಅವರು ಬಾವಿಯೊಳಗಿಂದ ಏರಿಹೋಗಿ, ಅರಸನಾದ ದಾವೀದನಿಗೆ, “ನೀನು ಶೀಘ್ರವಾಗಿ ಎದ್ದು ನದಿಯನ್ನು ದಾಟಿ ಹೋಗು; ಏಕೆಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧವಾಗಿ ಆಲೋಚನೆ ಹೇಳಿದ್ದಾನೆ,” ಎಂದರು.