2 Samuel 17:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.
Kannada BSI Bible 2016
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇವಿುಸಿದನು. ಇಸ್ರಾಯೇಲ್ಯನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬವಳನ್ನು ಕೂಡಿದ್ದರಿಂದ ಈ ಅಮಾಸನು ಹುಟ್ಟಿದನು.
Kannada Bible (KNCL) BSI 2016
ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.