2 Samuel 17:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 28
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
Kannada BSI Bible 2016
ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.
Kannada Bible (KNCL) BSI 2016
ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.