2 Samuel 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಆ ಮನುಷ್ಯನಿಗೆ, “ನೀನು ಅವನನ್ನು ಕೊಂದು ನೆಲಕ್ಕುರುಳಿಸಲಿಲ್ಲವೇಕೆ?” ನಾನು ನಿನಗೆ ಒಂದು ಸೊಂಟಪಟ್ಟಿಯನ್ನು ಮತ್ತು ಹತ್ತು ಬೆಳ್ಳಿರೂಪಾಯಿಗಳನ್ನು ಕೊಡುತ್ತಿದ್ದೆನಲ್ಲ!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
Kannada BSI Bible 2016
ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ರೂಪಾಯಿಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು ಅಂದನು.
Kannada Bible (KNCL) BSI 2016
ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.