2 Samuel 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
Kannada BSI Bible 2016
ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಮನುಷ್ಯನು - ನೀನು ನನ್ನ ಕೈಯಲ್ಲಿ ಸಾವಿರ ರೂಪಾಯಿಗಳನ್ನಿಟ್ಟರೂ ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ ಅಬೀಷೈಗೂ ಇತ್ತೈಗೂ - ಜಾಗರೂಕತೆಯಿಂದಿರ್ರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು ಎಂದು ಆಜ್ಞಾಪಿಸಿದನಲ್ಲವೋ?
Kannada Bible (KNCL) BSI 2016
ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.