2 Samuel 18:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅಬ್ಷಾಲೋಮನನ್ನು ಕೊಂದಿದ್ದರೆ ಸ್ವತಃ ರಾಜನೇ ಕಂಡು ಹಿಡಿಯುತ್ತಿದ್ದನು. ನೀನೇ ನನ್ನನ್ನು ದಂಡಿಸುತ್ತಿದ್ದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
Kannada BSI Bible 2016
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ಮರೆಯಾಗುವದಿಲ್ಲ; ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ನಾನು ಅವನ ಪ್ರಾಣಕ್ಕೆ ಅಪಾಯವನ್ನು ಉಂಟುಮಾಡಿದರೆ ಅದು ಅರಸರಿಗೆ ಮರೆಯಾಗುವುದಿಲ್ಲ; ನೀವೂ ನನ್ನನ್ನು ಕೈಬಿಟ್ಟು ದೂರನಿಲ್ಲುವಿರಿ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.