2 Samuel 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
Kannada BSI Bible 2016
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋವಾಬನು - ಇಲ್ಲಿ ನಿಂತು ತಡ ಮಾಡುವದೇಕೆ ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ
Kannada Bible (KNCL) BSI 2016
ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.