2 Samuel 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನು ಕಹಳೆಯನ್ನು ಊದಿ, ಅಬ್ಷಾಲೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
Kannada BSI Bible 2016
ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವದಕ್ಕಾಗಿ ತುತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂದಿರುಗಿದರು.
Kannada Bible (KNCL) BSI 2016
ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.