2 Samuel 18:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
Kannada BSI Bible 2016
ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.
Kannada Bible (KNCL) BSI 2016
ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.