2 Samuel 18:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
Kannada BSI Bible 2016
ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ
Kannada Bible (KNCL) BSI 2016
ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.