2 Samuel 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
Kannada BSI Bible 2016
ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ - ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟಹೋದನು.
Kannada Bible (KNCL) BSI 2016
ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸರಿಗೆ ತಿಳಿಸು,” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.