2 Samuel 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹೀಮಾಚನು, “ಏನಾದರೂ ಆಗಲಿ, ನಾನು ಓಡಿಹೋಗುತ್ತೇನೆ” ಎಂದು ಉತ್ತರಿಸಿದನು. “ಓಡು” ಎಂದು ಯೋವಾಬನು ಅಹೀಮಾಚನಿಗೆ ಹೇಳಿದನು. ಆಗ ಅಹೀಮಾಚನು ಜೋರ್ಡನ್ ಕಣಿವೆಯ ಮೂಲಕ ಓಡಿಹೋದನು. ಅವನು ಇಥಿಯೋಪ್ಯದವನಿಗಿಂತ ಮೊದಲೇ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
Kannada BSI Bible 2016
ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಹೀಮಾಚನು ತಿರಿಗಿ - ಚಿಂತೆಯಿಲ್ಲ, ನನ್ನನ್ನೂ ಕಳುಹಿಸು ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು ಹೋಗು ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
Kannada Bible (KNCL) BSI 2016
ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು‍.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.