2 Samuel 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
Kannada BSI Bible 2016
ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಎರಡು ಬಾಗಲುಗಳ ಮಧ್ಯದಲ್ಲಿ ಕೂತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡನು.
Kannada Bible (KNCL) BSI 2016
ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.