2 Samuel 18:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು. ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
Kannada BSI Bible 2016
ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ - ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ದಾನೆ ಎಂದು ಅರಸನಿಗೆ ತಿಳಿಸಿದನು. ಅರಸನು - ಹಾಗಾದರೆ ಅವನೂ ಸಮಾಚಾರ ತರುವವನು ಎಂದು ಹೇಳಿದನು.
Kannada Bible (KNCL) BSI 2016
ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.