2 Samuel 18:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
Kannada BSI Bible 2016
ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾವಲುಗಾರನು - ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ ಎಂದನು. ಅದಕ್ಕೆ ಅರಸನು - ಅವನು ಒಳ್ಳೆಯವನು; ಶುಭವರ್ತಮಾನತರುವವನು ಅಂದನು.
Kannada Bible (KNCL) BSI 2016
ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.