2 Samuel 18:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
Kannada BSI Bible 2016
ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು.
Kannada Bible (KNCL) BSI 2016
ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.