2 Samuel 18:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
Kannada BSI Bible 2016
ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.