2 Samuel 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
Kannada BSI Bible 2016
ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೈನ್ಯದವರು ಅವನಿಗೆ - ನೀನು ಬರಬಾರದು; ನಾವು ಸೋತು ಓಡಿ ಹೋದರೆ ಶತ್ರುಗಳು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿನ್ನೊಬ್ಬನಿಗೇ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು ಅಂದರು.
Kannada Bible (KNCL) BSI 2016
ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.