2 Samuel 18:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
Kannada BSI Bible 2016
ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಲು ಅವನು - ನನ್ನ ಒಡೆಯನಾದ ಅರಸನ ಶತ್ರುಗಳಿಗೂ ಅವನಿಗೆ ಕೇಡು ಮಾಡುವದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.