2 Samuel 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ತನ್ನ ಜನರಿಗೆ, “ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ” ಎಂದು ಹೇಳಿದನು. ಆಗ ರಾಜನು ಊರಬಾಗಿಲಿನ ಪಕ್ಕದಲ್ಲಿ ನಿಂತುಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು. “ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿರಿ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
Kannada BSI Bible 2016
ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅವರಿಗೆ - ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ ಎಂದು ಹೇಳಿ ಊರುಬಾಗಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
Kannada Bible (KNCL) BSI 2016
ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.