2 Samuel 18:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
Kannada BSI Bible 2016
ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
Kannada Bible (KNCL) BSI 2016
ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.