2 Samuel 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
Kannada BSI Bible 2016
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.
Kannada Bible (KNCL) BSI 2016
ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.