2 Samuel 19:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?
Kannada BSI Bible 2016
ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಈ ಪ್ರಕಾರ ಮಾತಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಯಾಜಕರಾದ ಚಾದೋಕ್ ಎಬ್ಯಾತಾರರಿಗೆ - ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ - ಅರಸನಾದ ನನ್ನನ್ನು ತಿರಿಗಿ ಅರಮನೆಗೆ ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದೇಕೆ?
Kannada Bible (KNCL) BSI 2016
ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?