2 Samuel 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಮಾತುಗಳು ಯೆಹೂದದ ಜನರೆಲ್ಲರ ಹೃದಯಗಳಿಗೆ ತಾಕಿದವು, ಅವರೆಲ್ಲರೂ ಒಂದೇ ಮನಸ್ಸಿನಿಂದ ಒಪ್ಪಿಕೊಂಡರು. ಯೆಹೂದದ ಜನರು ರಾಜನಿಗೆ, “ನೀನು ನಿನ್ನ ಸೇವಕರೆಲ್ಲರೊಡನೆ ಹಿಂದಿರುಗಿ ಬಾ” ಎಂಬ ಸಂದೇಶವೊಂದನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
Kannada BSI Bible 2016
ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು.
Kannada Bible (KNCL) BSI 2016
ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.