2 Samuel 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
Kannada BSI Bible 2016
ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದಕುಲದವರು ಅವನನ್ನು ಎದುರುಗೊಳ್ಳುವದಕ್ಕೂ ಯೊರ್ದನ್ ಹೊಳೆಯನ್ನು ದಾಟಿಸುವದಕ್ಕೂ ಗಿಲ್ಗಾಲಿಗೆ ಬಂದರು.
Kannada Bible (KNCL) BSI 2016
ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.