2 Samuel 19:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
Kannada BSI Bible 2016
ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು
Kannada Bible (KNCL) BSI 2016
ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.