2 Samuel 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಸೈನ್ಯವು ಅಂದು ಯುದ್ಧದಲ್ಲಿ ಜಯಗಳಿಸಿತು. ಆದರೆ ಜನರಿಗೆಲ್ಲ ಆ ದಿನವೇ ಅತ್ಯಂತ ಶೋಕದ ದಿನವೂ ಆಯಿತು. “ರಾಜನು ಮಗನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂಬುದನ್ನು ಜನರು ಕೇಳಿ ದುಃಖಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.
Kannada BSI Bible 2016
ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಮಗನಿಗೋಸ್ಕರ ಪ್ರಲಾಪಿಸುತ್ತಿದ್ದಾನೆಂಬದು ಎಲ್ಲಾ ಜನರಿಗೂ ಗೊತ್ತಾದದರಿಂದ ಅವರ ಜಯಘೋಷವು ಗೋಳಾಟವಾಯಿತು.
Kannada Bible (KNCL) BSI 2016
ಅರಸನು ಮಗನಿಗಾಗಿ ಪ್ರಲಾಪಿಸುತ್ತಿದ್ದಾನೆಂಬುದು ಎಲ್ಲ ಜನರಿಗೂ ಗೊತ್ತಾಗಿ ಅವರ ಜಯಘೋಷ ಗೋಳಾಟವಾಗಿ ಮಾರ್ಪಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.