2 Samuel 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
Kannada BSI Bible 2016
ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.
Kannada Bible (KNCL) BSI 2016
ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.