2 Samuel 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.
Kannada BSI Bible 2016
ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯಳ ಮಗನಾದ ಅಬೀಷೈಯು - ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ ಅಂದನು.
Kannada Bible (KNCL) BSI 2016
ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.