2 Samuel 19:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
Kannada BSI Bible 2016
ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,
Kannada Bible (KNCL) BSI 2016
ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.