2 Samuel 19:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆಫೀಬೋಶೆತನು, “ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೀಬನು ನನಗೆ ಮೋಸಮಾಡಿದನು. ನಾನು ಚೀಬನಿಗೆ, ‘ನಾನು ಕುಂಟನಾಗಿರುವದರಿಂದ ತಡಿಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ’ ಎಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.
Kannada BSI Bible 2016
ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ - ಕತ್ತೆಗೆ ತಡಿಹಾಕು, ನಾನು ಕೂತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು ಎಂದು ಆಜ್ಞಾಪಿಸಿದೆನು.
Kannada Bible (KNCL) BSI 2016
ಅವನು, “ಒಡೆಯರೇ, ಅರಸರೇ, ನನ್ನ ಸೇವಕ ನನ್ನನ್ನು ವಂಚಿಸಿದ. ಕುಂಟನಾದ ನಾನು ಅವನಿಗೆ, ‘ಕತ್ತೆಗೆ ತಡಿಹಾಕು, ನಾನು ಕುಳಿತುಕೊಂಡು ಅರಸರ ಜೊತೆಯಲ್ಲೇ ಹೋಗಬೇಕು’ ಎಂದು ಆಜ್ಞಾಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.