2 Samuel 19:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.
Kannada BSI Bible 2016
ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು.
Kannada Bible (KNCL) BSI 2016
ಆಗ ಅರಸನು, “ಹೆಚ್ಚು ಮಾತು ಏಕೆ? ಹೊಲವನ್ನು ನೀನು ಹಾಗು ಚೀಬ ಭಾಗಮಾಡಿಕೊಳ್ಳಬೇಕು. ಇದೇ ನನ್ನ ತೀರ್ಪು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.