2 Samuel 19:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬರ್ಜಿಲ್ಲೈಯನು ಮುದುಕನಾಗಿದ್ದನು. ಅವನಿಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ದಾವೀದನು ಮಹನಯಿಮಿನಲ್ಲಿ ವಾಸಿಸುತ್ತಿದ್ದಾಗ ಅವನು ದಾವೀದನಿಗೆ ಆಹಾರವನ್ನೂ ಮತ್ತಿತರ ವಸ್ತುಗಳನ್ನೂ ಕೊಟ್ಟಿದ್ದನು; ಯಾಕೆಂದರೆ ಅವನು ಶ್ರೀಮಂತನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
Kannada BSI Bible 2016
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಎಂಭತ್ತು ವರುಷದ ಮುದುಕನು. ಇವನು ಬಹುಶ್ರೀಮಂತನಾಗಿದ್ದದರಿಂದ ದಾವೀದನು ಮಹನಯಿವಿುನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.
Kannada Bible (KNCL) BSI 2016
ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.