2 Samuel 19:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಗಾಲಿಗೆ ಹೋದನು. ಕಿಮ್ಹಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.
Kannada BSI Bible 2016
ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ ಇಸ್ರಾಯೇಲ್ಯರಲ್ಲಿ ಅರ್ಧಜನರೂ ಅರಸನನ್ನು ಕರಕೊಂಡು ಹೋದರು.
Kannada Bible (KNCL) BSI 2016
ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.