2 Samuel 19:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
Kannada BSI Bible 2016
ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು.
Kannada Bible (KNCL) BSI 2016
ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.